Bjp ರೈತ ಮೋರ್ಚಾ ಕರ್ನಾಟಕ ಭಾರತೀಯ ಜನತಾ ಪಾರ್ಟಿ ವಿಜಯಪೂರ ರೈತ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆ ನಿನ್ನೆ ಇಂಡಿ ನಗರದಲ್ಲಿ ನಡೆಯಿತು.ಈ ಕಾರ್ಯಕ್ರಮವನ್ನು ಮಾಜಿ ಸಚಿವರು ಹಾಗೂ ಹಾಲಿ ಲೋಕಸಭಾ ಸದಸ್ಯರಾದ ರಮೇಶ ಜಿಗಜಿಣಗಿ ಯವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ನಮ್ಮ ನೆಚ್ಚಿನ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ರೈತಾಪಿ ವರ್ಗಕ್ಕೆ ಪ್ರಧಾನ ಮಂತ್ರಿ ಭಿಮಾ ಫಸಲು ವಿಮೆ ಯೋಜನೆ, ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಸೇರಿದಂತೆ ಅನೇಕ ಒಳ್ಳೆಯ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಹೇಳಿದರು.ನಂತರ ಮಾತನಾಡಿದ ಅವರು ವಿಜಯಪೂರ ಜಿಲ್ಲೆಗೆ ಕೆರೆ ತುಂಬುವ ಯೋಜನೆ ಅನುಷ್ಠಾನಕ್ಕೆ ತಂದಿದ್ದು ಬಿಜೆಪಿ ಸರ್ಕಾರ ಇದನ್ನು ಮರೆತು ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರು ಇಂಡಿ ತಾಲ್ಲೂಕಿನ ಕರೆ ತುಂಬುವ ಯೋಜನೆ ನಾ ಮಾಡಿದ್ದು ನಾ ಮಾಡಿದ್ದು ಎಂದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡಿ ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದು ಕಿಡಿ ಕಾರಿದರು.ಮಾನ್ಯ ಜಲಸಂಪನ್ಮೂಲ ಸಚಿವರಾದ ಶ್ರೀ ಗೋವಿಂದ ಕಾರಜೋಳ ಅವರ ಪರಿಶ್ರಮದಿಂದ ಇಂಡಿ ತಾಲ್ಲೂಕಿನ ತಡವಲಗಾ, ಅಥರ್ಗಾ,ಹಂಜಗಿ, ಗ್ರಾಮಗಳ ಕೆರೆ ತುಂಬುವ ಯೋಜನೆ ಕೆಲಸ ಭರದಿಂದ ಸಾಗುತ್ತಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ವಿಧಾನಪರಿಷತ್ ಸದಸ್ಯ ಅರುಣ ಶಹಾಪೂರ, ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ಕಾಸುಗೌಡ ಬೀರಾದಾರ, ಬಿಜೆಪಿ ಮುಖಂಡರಾದ ದಯಾಸಾಗರ ಪಾಟೀಲ, ಶೀಲವಂತ ಉಮರಾಣಿ, ಶಂಕರಗೌಡ ಪಾಟೀಲ,ರವಿಕಾಂತ ಬಗಲಿ,R S ಪಾಟೀಲ (ಕೂಚಬಾಳ), ಮಲ್ಲಿಕಾರ್ಜುನ ಕಿವಡೆ,ಅನೀಲ ಜಮಾದಾರ, ಮಲ್ಲಿಕಾರ್ಜುನ ಜೋಗುರ,ಹಣಮಂತರಾಯಗೌಡ ಪಾಟೀಲ,ಆನಂದ ಬಿಸಗೊಂಡ, ಮುತ್ತು ದೇಸಾಯಿ, ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Reported By:
Raghu
Post a Comment