2ಎ ಮೀಸಲಾತಿಗೆ ಪಂಚಮಸಾಲಿ ಸಂಘಟನೆ ಆಗ್ರಹ : ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ - kittur

ಪ್ರತಾಪ್‍ಕುಮಾರಗೆ ಕನ್ನಡ ರತ್ನ ಪ್ರಶಸ್ತಿ - click...
2ಎ ಮೀಸಲಾತಿಗೆ ಪಂಚಮಸಾಲಿ ಸಂಘಟನೆ ಆಗ್ರಹ
ಪ್ರೆಸ್‍ಕ್ಲಬ್ ವಾರ್ತೆ
ಚನ್ನಮ್ಮನಕಿತ್ತೂರು:  ಮಕ್ಕಳ ಶಿಕ್ಷಣ ಹಾಗೂ ಯುವಕರ ಉದ್ಯೋಗಕ್ಕಾಗಿ ರಾಜ್ಯ ಸರ್ಕಾರ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2 ಎ ಮೀಸಲಾತಿ ನೀಡಬೇಕು ಮತ್ತು ಕೇಂದ್ರ ಸರ್ಕಾರÀ ಓಬಿಸಿ ಪಟ್ಟಿಗೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ರಾಷ್ಟ್ರೀಯ ಬಸವಸೇನೆ ವತಿಯಿಂದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಇಲ್ಲಿಯ ತಹಶೀಲ್ದಾರ್ ಮೂಲಕ ಮಂಗಳವಾರ ಮನವಿ ಸಲ್ಲಿಸಿದ ಅವರು, ಕೂಡಲೇ ಈ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು. 


ಲಿಂಗಾಯತ ಪಂಚಮಸಾಲಿ ತಾಲೂಕು ಘಟಕದ ಅಧ್ಯಕ್ಷ ಡಿ. ಆರ್. ಪಾಟೀಲ ಮಾತನಾಡಿ, ಸಮಾಜದ ಉಭಯ ಪೀಠಗಳ ಶ್ರೀಗಳ ನೇತೃತ್ವದಲ್ಲಿ ಜನೇವರಿ 14 ರಿಂದ ಫೆಬ್ರುವರಿ 21 ರ ವರೆಗೆ ಸುಮಾರು 7 ನೂರು ಕಿ.ಮೀ ಪಾದಯಾತ್ರೆ ಕೈಗೊಳ್ಳಲಾಗಿತ್ತು. ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡು ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿತ್ತು. ಅದಕ್ಕೆ ಅಂದಿನ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇದನ್ನು ಕೂಲಂಕುಷವಾಗಿ ಪರಿಶೀಲಿಸಲಾಗುವುದು. ಕುಲಶಾಸ್ತ್ರ ಅಧ್ಯಯನ ತಂಡವನ್ನು ನೇಮಿಸಿ ಸಮಾಜಕ್ಕೆ ನ್ಯಾಯ ಒದಗಿಸಿ ಕೊಡಲಾಗುವುದು ಎಂದು ಭರವಸೆ ನೀಡಿದ್ದರು. ಅಂದು ಕೊಟ್ಟ ಅವಧಿ ಮಂಗಳವಾರ ಮುಕ್ತಾಯವಾಗಿದೆ. ಈಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೂಚನೆ ನೀಡಿ ಈ ಭರವಸೆ ಈಡೇರಿಸಬೇಕು ಎಂದರು. 
ರಾಷ್ಟ್ರೀಯ ಬಸವ ಸೇನೆ ಅಧ್ಯಕ್ಷ ಬಸವರಾಜ ಚಿನಗುಡಿ, ಈರಣ್ಣ ಕೋಟಗಿ, ಈರಣ್ಣ ಹುಬ್ಬಳ್ಳಿ, ಸಕ್ಕರಗೌಡ ಪಾಟೀಲ, ಸುರೇಶ ಮನ್ನಿಕೇರಿ ಇದ್ದರು.