ರಸ್ತೆಗೆ ರೈತರ ಜಮೀನು ಬೇಡ - click...
ರಾಜ್ಯದೆಲ್ಲೆಡೆ ಸಂಗೊಳ್ಳಿ ರಾಯಣ್ಣ ಸಂಘಟನೆ ವಿಸ್ತರಣೆ
ಪ್ರೆಸ್‍ಕ್ಲಬ್ ವಾರ್ತೆ
ಚನ್ನಮ್ಮನ ಕಿತೂರು: ವೀರರಾಣಿ ಕಿತ್ತೂರು ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಂತಹ ಅನೇಕ ವೀರರು ಓಡಾಡಿರುವ ನೆಲದಿಂದ ಆರಂಭಗೊಂಡಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸಂಘಟನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ರಾಜ್ಯ ಘಟಕದ ಅಧ್ಯಕ್ಷ ಮಹಾಂತೇಶ ಕರಬಸಣ್ಣವರ ಘೋಷಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘಟನೆ ಮೂಲಕ ಅನೇಕ ವಿಧಾಯಕ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಯುವಕರನ್ನು ಹೆಚ್ಚು ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಯುವಕರ ಬಲವನ್ನು ವಿಧಾಯಕ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಲಾಗುವುದು ಎಂದು ಪ್ರಕಟಿಸಿದರು.
ರಾಯಣ್ಣನ ಶೌರ್ಯ, ಸಾಹಸ ಮತ್ತು ಆತನ ಜೀವನಗಾಥೆ ನಾಡಿನಾದ್ಯಂತ ಪ್ರಚಾರ ಪಡಿಸುವುದು ಅಷ್ಟೇ ಈ ಸಂಘಟನೆ ಉದ್ದೇಶವಲ್ಲ. ಸಾಮಾಜಿಕವಾಗಿಯೂ ಅನೇಕ ಕಾರ್ಯಕ್ರಮಗಳನ್ನು ಸಂಘಟಿಸಲು ಉದ್ದೇಶಿಸಿದೆ ಎಂದರು.
ಉತ್ತಮ ಪರಿಸರ ನಿರ್ಮಾಣ, ಯುವಕರಲ್ಲಿ ಆತ್ಮವಿಶ್ವಾಸ ವೃದ್ಧಿ, ಅವರಲ್ಲಿ ನೈತಿಕತೆ ಬೆಳೆಸುವುದು, ಮಕ್ಕಳಿಗಾಗಿ ಪ್ರಬಂಧ ಸ್ಪರ್ಧೆ ಏರ್ಪಾಟು ಸೇರಿ ಇತ್ಯಾದಿ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲು ಸಂಘಟನೆ ಚಿಂತನೆ ನಡೆಸುತ್ತಿದೆ ಎಂದು ವಿವರಿಸಿದರು.
ಉಪಾಧ್ಯಕ್ಷ ಮಹೇಶ ಮಲಶೆಟ್ಟಿ, ಕಾರ್ಯದರ್ಶಿ ವಿನಾಯಕ ಗಾಣಗಿ ಇದ್ದರು.
Post a Comment