ಕಾಂಗ್ರೆಸ್ ಮುಖಂಡ ಬಾಬಾಸಾಹೇಬ ಪ್ರಕಟ
ಪ್ರೆಸ್ಕ್ಲಬ್ ವಾರ್ತೆ
ಚನ್ನಮ್ಮನ ಕಿತ್ತೂರು: ಕಿತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿ ತೆರೆಯುವ ಪೂರ್ವ ಸಿದ್ಧತೆಗಳು ಭರದಿಂದ ಸಾಗಿದ್ದು, ಶೀಘ್ರ ಅದನ್ನು ಉದ್ಘಾಟಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಬಾಬಾಸಾಹೇಬ ಪಾಟೀಲ ತಿಳಿಸಿದರು.
ಭೇಟಿಯಾದ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ಬಳಿಯ ಅಶ್ವಾರೂಢ ರಾಣಿ ಚನ್ನಮ್ಮ ಪ್ರತಿಮೆ ಬಳಿ ಕಚೇರಿಗೆ ಸ್ಥಳ ನಿಗದಿ ಮಾಡಲಾಗಿದೆ ಎಂದರು.

ಬರುವ ಪಟ್ಟಣ, ತಾಲೂಕು ಹಾಗೂ ಜಿಲ್ಲಾ ಪಂಚಾಯ್ತಿಗೆ ನಡೆಯಲಿರುವ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳು ಸಿದ್ಧರಿದ್ದು, ಆಯೋಗ ಚುನಾವಣೆ ಘೋಷಿಸಿದ ಕೂಡಲೇ ರಣತಂತ್ರ ರೂಪಿಸಲಾಗುವುದು ಎಂದರು.
ವಿಧಾನಸಭೆ ಚುನಾವಣೆಗೂ ಸಿದ್ಧತೆಗಳನ್ನು ಪ್ರಾರಂಭಿಸಲಾಗಿದೆ. ಕಿತ್ತೂರು ಕ್ಷೇತ್ರವನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವು ಮರಳಿ ವಶಕ್ಕೆ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.