ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ ಶಾಸಕ ಮಹಾಂತೇಶ ದೊಡ್ಡಗೌಡರಿಗೆ ಭರವಸೆ - kittur

ಕಾಂಗ್ರೆಸ್ ಮುಖಂಡ ಬಾಬಾಸಾಹೇಬ ಪಾಟೀಲ ಪ್ರಕಟ - click...
 

‘ಕಿತ್ತೂರು ಕರ್ನಾಟಕ’ ಘೋಷಣೆಗೆ ಶಾಸಕರ ಮನವಿ
ಪ್ರೆಸ್‍ಕ್ಲಬ್ ವಾರ್ತೆ
ಚನ್ನಮ್ಮನ ಕಿತ್ತೂರು: ಮುಂಬೈ ಕರ್ನಾಟಕ ಭಾಗವನ್ನು ‘ಕಿತ್ತೂರು ಕರ್ನಾಟಕ' ಎಂದು ನಾಮಕರಣ ಮಾಡುವಂತೆ 
ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶಾಸಕ ಮಹಾಂತೇಶ ದೊಡ್ಡಗೌಡರ ಮನವಿ ಸಲ್ಲಿಸಿದ್ದಾರೆ.
ಹೈದರಾಬಾದ್ ಕರ್ನಾಟಕ ಭಾಗವನ್ನು ‘ಕಲ್ಯಾಣ ಕರ್ನಾಟಕ' ಎಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಅದೇ ರೀತಿ ಮುಂಬೈ ಕರ್ನಾಟಕವನ್ನು ‘ಕಿತ್ತೂರು ಕರ್ನಾಟಕ' ಎಂದು ನಾಮಕರಣ ಮಾಡುವಂತೆ ಮನವಿ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ದೊಡ್ಡಗೌಡರ ಪತ್ರಕರ್ತರಿಗೆ ತಿಳಿಸಿದರು.


ಸ್ವಾತಂತ್ರ್ಯ ಹೋರಾಟದ ಪ್ರಥಮ ಕಹಳೆ ಮೊಳಗಿಸಿದ್ದು ವೀರರಾಣಿ ಕಿತ್ತೂರು ಚನ್ನಮ್ಮ, ಕಿತ್ತೂರು ಸಂಸ್ಥಾನದ ಹೆಸರು ಚಿರಸ್ಥಾಯಿ ಆಗುವಂತೆ ಮಾಡಬೇಕಾಗಿರುವುದು ಎಲ್ಲರ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮುಂಬೈ ಕರ್ನಾಟಕ ಭಾಗವನ್ನು ‘ಕಿತ್ತೂರು ಕರ್ನಾಟಕ' ಎಂದು ನಾಮಕರಣ ಮಾಡುವುದರ ಮೂಲಕ ಈ ಭಾಗದ ಸರ್ವತೋಮುಖ ಅಭಿವೃದ್ಧಿಗೆ ನಾಂದಿ ಹಾಡಬೇಕಾಗಿದೆಯೆಂದು ಕೋರಿದ್ದೇನೆ ಎಂದು ಹೇಳಿದರು.
ಸಚಿವ ಸಂಪುಟದ ಎದುರು ಈ ವಿಷಯ ಮಂಡಿಸುವಂತೆ ಈಗಾಗಲೇ ಸಂಬಂಧಪಟ್ಟವರಿಗೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದ್ದಾರೆ. ಬಳಿಕ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ದೊಡ್ಡಗೌಡರ ವಿಶ್ವಾಸ ವ್ಯಕ್ತಪಡಿಸಿದರು.

0/Post a Comment/Comments