ಕೋರ್ಟ್‍ಗೆ ಒಂದು ವಾರ ರಜೆ - click...
ತಿಗಡೊಳ್ಳಿ: ಗ್ರಾಮ ಪಂಚಾಯ್ತಿಯಲ್ಲಿ ಗಾಂಧಿ, ಶಾಸ್ತ್ರಿ ಸ್ಮರಣೆ
ಪ್ರೆಸ್‍ಕ್ಲಬ್ ವಾರ್ತೆ
ತಿಗಡೊಳ್ಳಿ: ಇಲ್ಲಿಯ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ ಶಾಸ್ತ್ರಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಗಾಂಧಿ ಮತ್ತು ಶಾಸ್ತ್ರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಅನಂತರ ಮಾತನಾಡಿದ ಗ್ರಾಮ ಪಂಚಾಯ್ತಿ ಅಧ್ಯಕ್ಷ ಅಶೋಕ ಕಳಸಣ್ಣವರ ಇಬ್ಬರೂ ಮಹಾನ್ ಪುರುಷರ ಆದರ್ಶಗಳನ್ನು ಪ್ರತಿಯೊಬ್ಬರು ಬದುಕಿನಲ್ಲಿ ಅಳವಡಿಸಿಕೊಂಡು ನಡೆಯಬೇಕು ಎಂದು ಕರೆ ನೀಡಿದರು.
ಉಪಾಧ್ಯಕ್ಷೆ ಸವಿತಾ ಗೋದಳ್ಳಿ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ನಾಗರತ್ನಾ, ಕಾರ್ಯದರ್ಶಿ ಈಶ್ವರ ಸರಪಳಿ, ಗ್ರಾಮ ಪಂಚಾಯ್ತಿ ಸದಸ್ಯರಾದ ಗೋಪಾಲ ಹುಕ್ಕೇರಿ, ಜಗದೀಶ ಗೋದಳ್ಳಿ, ಕಲ್ಲಪ್ಪ ಕ್ಯಾತನವರ, ಕರೆವ್ವ ನಾಯ್ಕರ, ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.