ಸಂಸದೆÀ ಮಂಗಳಾ ಅಂಗಡಿ ಅವರು ರಾಣಿ ಚನ್ನಮ್ಮನ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಉತ್ಸವದ ಧ್ವಜಾರೋಹಣ ನೆರವೇರಿಸುವ ಮೂಲಕ ಜ್ಯೋತಿಯನ್ನು ಬರಮಾಡಿಕೊಂಡರು.
ನಂತರ ಚನ್ನಮ್ನ ಕಿತ್ತೂರಿನ ರಾಜಗುರು ಸಂಸ್ಥಾನ ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಮ್ಮುಖದಲ್ಲಿ ನಡೆದ ವೀರಜ್ಯೋತಿ ಸ್ವಾಗತ ಕಾರ್ಯಕ್ರಮದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಪಂ ಸಿಇಒ ದರ್ಶನ್ ಎಚ್.ವಿ., ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಶಿಧರ್ ಬಗಲಿ ಮತ್ತಿತರರು ಉಪಸ್ಥಿತರಿದ್ದರು.
ಮನಸೂರೆಗೊಂಡ ಜನಪದ ಕಲಾವಾಹಿನಿ:
ಜ್ಯೋತಿ ಸ್ವಾಗತಿಸಿದ ಬಳಿಕ ರಾಜಗುರು ಸಂಸ್ಥಾನ ಮಠದ ಮಡಿವಾಳ ರಾಜಯೋಗೀಂದ್ರ ಶ್ರೀಗಳು ಜಾನಪದ ಕಲಾವಾಹಿನಿಗೆ ಚಾಲನೆ ನೀಡಿದರು.
ನವಿಲು ನೃತ್ಯ, ಕೇರಳ ತೆಯಮ್ ನೃತ್ಯ, ಚಂಡಮದ್ದಳೆ, ಪೂಜಾ ಕುಣಿತ, ನಂದಿಧ್ವಜ, ಪಟಾಕುಣಿತ, ಚಿಟ್ಟೆಮೇಳ, ಗೊಂಬೆ ಕುಣಿತ, ಝಾಂಜ್ ಪಥಕ ಸೇರಿದಂತೆ ವಿವಿಧ ಕಲಾತಂಡದ ನೂರಾರು ಕಲಾವಿದರು ಪಾಲ್ಗೊಂಡು ಜನಪದ ಕಲಾವಾಹಿನಿಗೆ ಕಳೆ ತುಂಬಿದರು.
ಜನಪದ ಗೀತೆಗಳನ್ನು ಹಾಡುತ್ತ ಸಾಗಿದ ತಂಡವು ಚನ್ನಮ್ಮನ ಶೌರ್ಯ, ಸಾಹಸದ ಗುಣಗಾನ ಮಾಡುವ ಮೂಲಕ ಕಿತ್ತೂರಿನ ಐತಿಹಾಸಿಕ ಗತವೈಭವದ ಮೆಲುಕು ಹಾಕಿತು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಕಲಾವಾಹಿನಿಯು ಜನರ ಮನಸೂರೆಗೊಂಡಿತು. ಇದರೊಂದಿಗೆ ವಿವಿಧ ಇಲಾಖೆಯ ಕಾರ್ಯಗಳು ಹಾಗೂ ಯೋಜನೆಗಳ ಅರಿವು ಮೂಡಿಸುವ ಸ್ತಬ್ಧಚಿತ್ರಗಳು ಮನಸೆಳೆದವು.
ಪೂರ್ಣಕುಂಭ ಹೊತ್ತ ನೂರಾರು ಜನ ಮಹಿಳೆಯರು ಕಲಾವಾಹಿನಿಯ ಮೆರಗು ಹೆಚ್ಚಿಸಿದರು. ರಸ್ತೆಯ ಇಕ್ಕೆಗಲಗಳಲ್ಲಿ ನೆರೆದಿದ್ದ ಸಾವಿರಾರು ಜನರು ವಿವಿಧ ಕಲಾತಂಡಗಳ ಪ್ರದರ್ಶನವನ್ನು ವೀಕ್ಷಿಸಿದರು.
ಇದೇ ಸಂದರ್ಭದಲ್ಲಿ ಕಿತ್ತೂರು ಮಹಾದ್ವಾರದ ಬಳಿ ಇರುವ ಶೂರ ಸಂಗೊಳ್ಳಿ ರಾಯಣ್ಣ ಹಾಗೂ ಅಮಟೂರ ಬಾಳಪ್ಪ ಅವರ ಪ್ರತಿಮೆಗಳಿಗೆ ಗಣ್ಯರು ಮಾಲಾರ್ಪಣೆ ನೆರವೇರಿಸಿದರು.
ಉತ್ಸವದ ಅಂಗವಾಗಿ ಕಿತ್ತೂರಿನ ಗಡಾದಮರಡಿಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಧ್ವಜಾರೋಹಣ ನೆರವೇರಿಸಿದರು.
ವಸ್ತುಪ್ರದರ್ಶನಮೇಳಕ್ಕೆ ಡಿಸಿ ಚಾಲನೆ:
ಉತ್ಸವದ ಪ್ರಯುಕ್ತ ಕಲ್ಮಠದ ಗುರುಶಿದ್ದೇಶ್ವರ ಪ್ರೌಢಶಾಲೆಯ ಆವರಣದಲ್ಲಿ ನಡೆದ ವಸ್ತುಪ್ರದರ್ಶನ ಮೇಳಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಚಾಲನೆ ನೀಡಿದರು.
ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರ ಪ್ರಚಾರ ವಿಭಾಗವು ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಸ್ಥಾಪಿಸಿರುವ ವಿಶೇಷ ಮಳಿಗೆ, ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್, ಕೃಷಿ, ಆರೋಗ್ಯ, ಪಶುಪಾಲನೆ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಮಳಿಗೆಗಳನ್ನು ಗಣ್ಯರು ವೀಕ್ಷಿಸಿದರು. ಈ ವೇಳೆ ವಿವಿಧ ಮಹಿಳಾ ಸ್ವಯಂ ಸೇವಾ ಸಂಘಗಳ ಉತ್ಪಾದನಾ ಮಾರಾಟ ಮಳಿಗೆ, ಆಹಾರ ಪದಾರ್ಥಗಳು, ಖಾದಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿದ ಅವರು, ಆಯೋಜಕರಿಂದ ಮಾಹಿತಿ ಪಡೆದುಕೊಂಡರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಭೀಮಪ್ಪ ಅವರು ಮಳಿಗೆಗಳ ಕುರಿತು ವಿವರಿಸಿದರು.ಚನ್ನಮ್ನ ಕಿತ್ತೂರಿನ ರಾಜಗುರು ಸಂಸ್ಥಾನ ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಮ್ಮುಖದಲ್ಲಿ ನಡೆದ ಈ ಎಲ್ಲ ಕಾರ್ಯಕ್ರಮಗಳಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಪಂ ಸಿಇಒ ದರ್ಶನ್ ಎಚ್.ವಿ., ಬೈಲಹೊಂಗಲ ಎಸಿ ಶಶಿಧರ್ ಬಗಲಿ, ವಾರ್ತಾ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ವಿದ್ಯಾವತಿ ಭಜಂತ್ರಿ, ಕಿತ್ತೂರು ತಹಶೀಲ್ದಾರ ಮತ್ತಿತರರು ಉಪಸ್ಥಿತರಿದ್ದರು.
Post a Comment