ಸ್ತ್ರೀಶಕ್ತಿ ಸಂಘಟನೆಯಿಂದ ಗುಣಮಟ್ಟದ ವಸ್ತು ಉತ್ಪಾದನೆ
ಪ್ರೆಸ್‍ಕ್ಲಬ್ ವಾರ್ತೆ
ಚನ್ನಮ್ಮನ ಕಿತ್ತೂರು: ಸ್ತ್ರೀ ಶಕ್ತಿ ಸಂಘಟನೆಯ ಮಹಿಳೆಯರು ಉತ್ಪಾದಿಸುವ ವಸ್ತುಗಳು ಗುಣಮಟ್ಟದ್ದಾಗಿರುತ್ತವೆ ಎಂದು ಸಂಸದೆ ಮಂಗಲಾ ಅಂಗಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕಿತ್ತೂರು ಉತ್ಸವದ ಅಂಗವಾಗಿ ಪ್ರಥಮ ದಿನ ಏರ್ಪಡಿಸಲಾಗಿದ್ದ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಆರ್ಥಿಕವಾಗಿ ಮುಂದುವರೆಯಬೇಕು. ಇಂಥ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಅವರಿಗೆ ಸಹಕಾರಿಯಾಗಿವೆ ಎಂದು ನುಡಿದರು.
ಶಾಸಕ ಮಹಾಂತೇಶ ದೊಡ್ಡಗೌಡರ, ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದರ್ಶನ್, ಉಪವಿಭಾಗಾಧಿಕಾರಿ ಶಶಿಧರ ಬಗಲಿ, ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಸವರಾಜ ವರವಟ್ಟಿ, ಸಹಾಯಕ ನಿರ್ದೇಶಕಿ ರೇವತಿ ಹೊಸಮಠ, ಹಿರಿಯ ಮೇಲ್ವಿಚಾರಕಿ ವಾಸಂತಿ ಹಿರೇಮಠ ಉಪಸ್ಥಿತರಿದ್ದರು.
Post a Comment