ಕುಲವಳ್ಳಿಯಲ್ಲಿ ವ್ಯಕ್ತಿಯ ಕೊಲೆ
ಪ್ರೆಸ್‍ಕ್ಲಬ್ ವಾರ್ತೆ
ಚನ್ನಮ್ಮನ ಕಿತ್ತೂರು: ತಾಲೂಕಿನ ಕುಲವಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರದಿಂದ ಹೊಡೆದು ಶನಿವಾರ ರಾತ್ರಿ ಕೊಲೆ ಮಾಡಲಾಗಿದೆ. ಗ್ರಾಮ ಪಂಚಾಯ್ತಿ ಎದುರಿಗಿರುವ ಈತನ ಮನೆಯ ಮುಂದೆಯೇ ಈ ಘಟನೆ ನಡೆದಿರುವುದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಫಕ್ಕೀರಪ್ಪ ಬಸಪ್ಪ ಉಪ್ಪಾರ (45) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊಲೆಗೆ ಕಾರಣವೇನೆಂಬುದು ಪೊಲೀಸರ ತನಿಖೆಯಿಂದ ಬಯಲಾಗಬೇಕಿದೆ.
ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a Comment