ಸಿಎಂ ಅವರಿಗೆ ಕೃತಜ್ಞತೆ
ಪ್ರೆಸ್‍ಕ್ಲಬ್ ವಾರ್ತೆ
ಚನ್ನಮ್ಮನ ಕಿತ್ತೂರು: ಮುಂಬೈ ಕರ್ನಾಟಕ ಪ್ರದೇಶಕ್ಕೆ ಕಿತ್ತೂರು ಕರ್ನಾಟಕ ಎಂದು ಹೊಸ ನಾಮಕರಣ ಮಾಡಲು ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಮಸ್ತ ಕಿತ್ತೂರು ಕರ್ನಾಟಕ ಜನತೆ ಪರವಾಗಿ ಬೆಂಗಳೂರಿನಲ್ಲಿ ಮಂಗಳವಾರ ಅಭಿನಂದಿಸಿ, ಕೃಜತ್ಞತೆ ಸಲ್ಲಿಸಲಾಯಿತು.
ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ ಅವರು ಬೊಮ್ಮಾಯಿ ಅವರಿಗೆ ಶಾಲು ಹೊದಿಸಿ, ಫಲಪುಷ್ಟ ತಟ್ಟೆ ನೀಡಿ ಆತ್ಮೀಯವಾಗಿ ಅಭಿನಂದಿಸಿದರು. ಶಾಸಕ ಮಹಾಂತೇಶ ದೊಡ್ಡಗೌಡರ, ತೆರದಾಳ ಶಾಸಕ ಸಿದ್ದು ಸವದಿ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ ಉಪಸ್ಥಿತರಿದ್ದರು.
Post a Comment