ಗ್ರಾಮದೇವಿ ದೇವಸ್ಥಾನದಲ್ಲಿ ಕಳ್ಳತನ - Kittur
ಗ್ರಾಮದೇವಿ ದೇವಸ್ಥಾನದಲ್ಲಿ ಕಳ್ಳತನ
ಪ್ರೆಸ್‍ಕ್ಲಬ್ ವಾರ್ತೆ
ತುರಮರಿ: ಬೈಲಹೊಂಗಲ ತಾಲ್ಲೂಕಿನ  ತಿಗಡಿಯ ಗ್ರಾಮದೇವಿ ದೇವಸ್ಥಾನದಲ್ಲಿ ಕಳ್ಳತನವಾಗಿದ್ದು, ದೇವತೆ ಕೊರಳಲ್ಲಿದ್ದ ಚಿನ್ನ ಮತ್ತು ಬೆಳ್ಳಿ ಆಭರಣ ದೋಚಿಕೊಂಡು ಕಳ್ಳ ಪರಾರಿಯಾಗಿದ್ದಾನೆ.
ಗುರುವಾರ ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ. ಸುದ್ದಿ ತಿಳಿದ ಬೈಲಹೊಂಗಲ ಪೊಲೀಸರು ಶುಕ್ರವಾರ ಬೆಳಿಗ್ಗೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಕರೆಸಲಾಗಿತ್ತು.
ಬೈಲಹೊಂಗಲ ಠಾಣೆಯಲ್ಲಿ ಪ್ರಕರಣ  ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

0/Post a Comment/Comments