ಕೊಲೆಯಾದ ಅಪರಿಚಿತ ವ್ಯಕ್ತಿಯ ಶವ ಪತ್ತೆ - Kittur 
ಕೊಲೆಯಾದ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಪ್ರೆಸ್‍ಕ್ಲಬ್ ವಾರ್ತೆ

ಚನ್ನಮ್ಮನ ಕಿತ್ತೂರು: ರಾಷ್ಟ್ರೀಯ ಹೆದ್ದಾರಿ ಬದಿಗಿರುವ ಕಿತ್ತೂರು ತಾಲ್ಲೂಕಿನ ತಿಮ್ಮಾಪುರ ಗ್ರಾಮದ ಬಳಿಯ ಸರ್ವಿಸ್ ರಸ್ತೆಗೆ  ಹೊಂದಿಕೊಂಡಿರುವ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಗುರುವಾರ ಪತ್ತೆಯಾಗಿದ್ದು, ಅತನನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಖಚಿತ ಪಡಿಸಿದ್ದಾರೆ.

ಸುಮಾರು 36 ವರ್ಷ ವಯಸ್ಸಿನ ವ್ಯಕ್ತಿ ಆತನಾಗಿದ್ದು, ಕುತ್ತಿಗೆಗೆ ಹಗ್ಗದಿಂದ ಬಿಗಿದು ಕೊಲೆ ಮಾಡಿರಬಹುದು ಎಂದು ಪೊಲೀಸರು   ಅನುಮಾನ ವ್ಯಕ್ತಪಡಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾಲಿಂಗ ನಂದಗಾವಿ, ಡಿವೈಎಸ್ಪಿ ಶಿವಾನಂದ ಕಟಗಿ ಸ್ಥಳಕ್ಕೆ ಭೇಟಿ ನೀಡಿದ್ದರು. ಸಿಪಿಐ ಮಂಜುನಾಥ ಕುಸುಗಲ್, ಪಿಎಸ್‍ಐ ದೇವರಾಜ ಉಳ್ಳಾಗಡ್ಡಿ ಹಾಗೂ ಸಿಬ್ಬಂದಿಯವರು ಹಿರಿಯ     ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸ್ಥಳದ ಪಂಚನಾಮೆ ನಡೆಸಿದರು.

ಕಿತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

0/Post a Comment/Comments