ಗ್ರಾಮ ಒನ್ ಸೇವಾ ಕೇಂದ್ರಕ್ಕೆ ಚಾಲನೆ - Kittur


 ಗ್ರಾಮ ಒನ್ ಸೇವಾ ಕೇಂದ್ರಕ್ಕೆ ಚಾಲನೆ

ಪ್ರೆಸ್‍ಕ್ಲಬ್ ವಾರ್ತೆ

ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯ್ತಿಯಲ್ಲಿ ಕರ್ನಾಟಕ ಸರ್ಕಾರದ   ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಕ್ಕೆ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಬುಧವಾರ ಚಾಲನೆ ನೀಡಿದರು. 

ವರ್ಚುವಲ್ ವೇದಿಕೆಯ ಮೂಲಕ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಸರ್ಕಾರಿ ಸೇವೆಗಳನ್ನು ಪಡೆಯಲು ನಾಗರಿಕರು ಜಿಲ್ಲೆ, ತಾಲ್ಲೂಕು ಮತ್ತು ಹೋಬಳಿ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವಿಲ್ಲ. ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಕೇಂದ್ರದಡಿ ಪಡೆಯಬಹುದಾಗಿದೆ. ಇದರಿಂದ ನಾಗರಿಕರು ಸಮಯ ಮತ್ತು ದುಡ್ಡನ್ನು ಉಳಿಸಬಹುದಾಗಿದೆ ಎಂದರು.

ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ, ಗ್ರೇಡ್ 2 ತಹಶೀಲ್ದಾರ್ ರವೀಂದ್ರ ನೇಸರಗಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರದ ಜಿಲ್ಲಾ ಸಂಯೋಜಕ ಅತೀಶ್ ದಾಲೆ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಬಿಬಿಜಾನ ಗಡಾದ, ಅಭಿವೃಧ್ದಿ ಅಧಿಕಾರಿ ಜಯರಾಂ ಕಾದ್ರೊಳ್ಳಿ, ಪಂಚಾಯ್ತಿ ಸದಸ್ಯರು, ಗ್ರಾಮ ಒನ್ ಕೇಂದ್ರದ ಆಪರೇಟರ್ ಅನ್ನಪೂರ್ಣ ಕಮ್ಮಾರ ಹಾಗೂ ಗ್ರಾಮಸ್ಥರು ಇದ್ದರು.

0/Post a Comment/Comments