ಪ್ರೊ. ಮಾರುತಿ ಅವರಿಗೆ ಪಿಎಚ್‍ಡಿ ಪದವಿ - click...
ದೊಡ್ಡಗೌಡರ ಪ್ರಶ್ನೆಗೆ ಸಚಿವ ಈಶ್ವರಪ್ಪ ಉತ್ತರ
ಪ್ರೆಸ್‍ಕ್ಲಬ್ ವಾರ್ತೆ
ಚನ್ನಮ್ಮನ ಕಿತ್ತೂರು: ರೂ. 315 ಕೋಟಿ ಅಂದಾಜು ವೆಚ್ಚದ ಮಹತ್ವಾಕಾಂಕ್ಷಿ ಯರಜರ್ವಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ತಿಂಗಳಲ್ಲಿ ಟೆಂಡರ್ ಕರೆಯಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ವಿಧಾನಸಭೆಯಲ್ಲಿ ಬುಧವಾರ ಭರವಸೆ ನೀಡಿದ್ದಾರೆ.
ಶಾಸಕ ಮಹಾಂತೇಶ ದೊಡ್ಡಗೌಡರ ಅವರ ಚುಕ್ಕೆ ಗಾತ್ರದ ಪ್ರಶ್ನೆಗೆ ಸಚಿವ ಈಶ್ವರಪ್ಪ ಅವರು ಈ ಭರವಸೆ ಕೊಟ್ಟಿದ್ದಾರೆ.
ರೂ. 400 ಕೋಟಿಯ ದೇಗಾಂವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಟೆಂಡರ್ ಪ್ರಕ್ರಿಯೆ ನಡೆಸಲು ಎರಡು ತಿಂಗಳು ಬೇಕಾಗಿದೆ ಎಂದು ಸಚಿವರು ಸ್ಪಷ್ಟನೆ ನೀಡಿದರು.
ಜಲಜೀವನ್ ಮಿಷನ್ ಯೋಜನೆಯಡಿ ಕಿತ್ತೂರು, ಬೈಲಹೊಂಗಲ, ಸವದತ್ತಿ ಮತ್ತು ಖಾನಾಪುರ ತಾಲೂಕಿನ ಎಲ್ಲ ಗ್ರಾಮಗಳಿಗೆ ನವಿಲುತೀರ್ಥ ಜಲಾಶಯದಿಂದ ಕುಡಿಯುವ ನೀರು ಒದಗಿಸುವ ಕಾಮಗಾರಿಗೆ ಈಗಾಗಲೇ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಿದ್ದು ಅನುಮೋದನೆ ಹಂತದಲ್ಲಿದೆ. ಸರ್ಕಾರ ಕೂಡಲೇ ಅನುಮೋದನೆ ನೀಡುವಂತೆ ಶಾಸಕರು ಮನವಿ ಮಾಡಿದರು.
Post a Comment