ಈರಪ್ಪ ಬಬಲಿ ಕಲಾವಿದರ ಒಕ್ಕೂಟದ ತಾಲೂಕು ಅಧ್ಯಕ್ಷ
ಪ್ರೆಸ್ಕ್ಲಬ್ ವಾರ್ತೆ
ಚನ್ನಮ್ಮನ ಕಿತ್ತೂರು: ಕರ್ನಾಟಕ ರಾಜ್ಯ ಕಲಾವಿದರ ಒಕ್ಕೂಟದÀ ತಾಲೂಕು ಘಟಕದ ಅಧ್ಯಕ್ಷರಾಗಿ ಸಮೀಪದ ಬಸಾಪುರ ಗ್ರಾಮದ ಈರಪ್ಪ ಫಕ್ಕೀರಪ್ಪ ಬಬಲಿ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ರಾ. ವೀರೇಶ ಪ್ರಸಾದ್ (ಗುಬ್ಬಿ ವೀರಣ್ಣ) ಅವರು ಆದೇಶ ಹೊರಡಿಸಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ಅದೇ ಗ್ರಾಮದ ಈರಣ್ಣ ಗುರುಸಿದ್ಧಪ್ಪ ಬಬಲಿ ಹಾಗೂ ಸದಸ್ಯರಾಗಿ ಸೂರ್ಯಕಾಂತ ಎಸ್. ಕೆ. ನೇಮಕಗೊಂಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಲಾವಿದರ ಒಕ್ಕೂಟಕ್ಕೆ ಸದಸ್ಯತ್ವ ನೋಂದಣಿ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು, ಮಾಹಿತಿಗಾಗಿ 7975384252, 9980440139 ಮೊಬೈಲ್ ಸಂಖ್ಯೆಗೆ ಕರೆ ಮಾಡುವಂತೆ ಕೋರಲಾಗಿದೆ.