ಪಕ್ಷ ಬೆಂಬಲಿಸಲು ಸಭೆ ಶೀಘ್ರ - Kittur


 ಪಕ್ಷ ಬೆಂಬಲಿಸಲು ಸಭೆ ಶೀಘ್ರ

ಪ್ರೆಸ್‍ಕ್ಲಬ್ ವಾರ್ತೆ

ಚನ್ನಮ್ಮನ ಕಿತ್ತೂರು: ಕಿತ್ತೂರು ಕರ್ನಾಟಕ ರೈತ ಜಾಗೃತಿ ಸಂಘವು ವಿಧಾನಸಭೆ ಚುನಾವಣೆಯಲ್ಲಿ ಕಿತ್ತೂರು ಕ್ಷೇತ್ರದ ಯಾವ  ಅಭ್ಯರ್ಥಿ ಬೆಂಬಲಿಸಬೇಕು  ಎಂಬುದನ್ನು ಚರ್ಚಿಸಲು ಶೀಘ್ರ  ರೈತರು, ಹಿತಚಿಂತಕರ ಸಭೆ ಕರೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಂಘಟನೆ ಅಧ್ಯಕ್ಷ ಎಂ. ಎಫ್. ಜಕಾತಿ ತಿಳಿಸಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಜನತೆಯೊಂದಿಗೆ ಬೆರೆತು ಮಾತನಾಡುವ ಮತ್ತು ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುವ ವ್ಯಕ್ತಿಗೆ ಬೆಂಬಲ ನೀಡಲು ಆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಗುವುದು ಎಂದು ಅವರು ಹೇಳಿದರು.

0/Post a Comment/Comments